Loading..!

ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:12 ಫೆಬ್ರುವರಿ 2020
not found
ಬಳ್ಳಾರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಬಳ್ಳಾರಿ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 24 ಫೆಬ್ರುವರಿ 2020 ಕೊನೆಯ ದಿನವಾಗಿದೆ. ಹುದ್ದೆಗಳ ವಿವರ : * ಆದೇಶ ಜಾರಿಕಾರ 02 ಹುದ್ದೆ * ಬೆರಳಚ್ಚು ನಕಲುಗಾರ 09 ಹುದ್ದೆ * ಬೆರಳಚ್ಚುಗಾರ 06 ಹುದ್ದೆಗಳು
No. of posts:  17
Application End Date:  24 ಫೆಬ್ರುವರಿ 2020
Qualification: - ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.

* ಬೆರಳಚ್ಚುಗಾರ ಹುದ್ದೆಗಳಿಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.

* ಬೆರಳಚ್ಚುಗಾರ ನಕಲುಗಾರ ಹುದ್ದೆಗಳಿಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.

* ಆದೇಶ ಜಾರಿಕಾರ ಹುದ್ದೆಗೆ ಲಘು/ಭಾರಿ ವಾಹನ ಚಾಲನಾ ಪರವಾನಗಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
Fee: * ಸಾಮಾನ್ಯ ವರ್ಗ, ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳಿಗೆ ರೂ.250/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಎಲ್ಲಾ ವರ್ಗದ ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿ ಪಡಿಸಿರುವ ಕೊನೆಯ ದಿನಾಂಕದ ಅನ್ವಯ ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ,
ಹಿಂದುಳಿದ ವರ್ಗಗಳಿಗೆ ಗರಿಷ್ಠ 38 ವರ್ಷ ಮತ್ತು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷದೊಳಗಿನ ಅಭ್ಯರ್ತಿಗಳು ಅರ್ಜಿಯನ್ನು ಸಲ್ಲಿಸಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬಳ್ಳಾರಿ ಜಿಲ್ಲೆ, KA,
to download official notification Ballari District Court Recruitment 2020
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments