ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಖಾಲಿ ಇರುವ ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ /ಎಸ್‌ಎಲ್‌ಡಬ್ಲ್ಯೂಎಂ ಸಮಾಲೋಚಕರ ಹುುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅನುಭವ ಹೊಂದಿದವರೆಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ದಿನಾಂಕ 31 ಜನವರಿ 2022 ರೊಳಗಾಗಿ ಈ ಕೆಳಗೆ ನೀಡಿರುವ ಅಂಚೆ ವಿಳಾಸದ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:
Chief Executive Officer, officer of the zilla panchayat,
beerasandra, chapparadakallu, devanahalli taluk,
Bengaluru rural district
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳು ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಎನ್ವಿರಾನ್ಮೆಂಟಲ್(Environmental) ಇಂಜಿನಿಯರಿಂಗ್ / ಸಿವಿಲ್(Civil) ಇಂಜಿನಿಯರಿಂಗ್ವಿದ್ಯಾರ್ಹತೆಯನ್ನು ಹೊಂದಿರಬೇಕು. ಜೊತೆಗೆ ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು.
ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

Comments