ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯತಿಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಇರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ 15 ವಿವಿಧ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆಗಳ ವಿವರ : 15
* ತಾಂತ್ರಿಕ ಸಹಾಯಕರು (ಸಿವಿಲ್) - 10
* ತಾಂತ್ರಿಕ ಸಹಾಯಕರು (ಅರಣ್ಯ) - 02
* ತಾಂತ್ರಿಕ ಸಹಾಯಕರು (ತೋಟಗಾರಿಕೆ ಮತ್ತು ಕೃಷಿ) - 03
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ನೇರವಾಗಿ ಇಲಾಖೆಗೆ ಭೇಟಿ ನೀಡಿ ಅಗತ್ಯ ದಾಖಲೆಗಳೊಂದಿಗೆ ಕೊನೆಯ ದಿನಾಂಕ 12/05/2022 ರೊಳಗೆ ನೇರವಾಗಿ ಅರ್ಜಿಯನ್ನು ಸಲ್ಲಿಸಬೇಕು.
ಇಲಾಖೆಯ ಸ್ಥಳ :
ಜಿಲ್ಲಾ ಪಂಚಾಯತಿ ಕಾರ್ಯಾಲಯ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಬೀರಸಂದ್ರ, ಚಪ್ಪರದಕಲ್ಲು, ದೇವನಹಳ್ಳಿ ತಾಲ್ಲೂಕು
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು B.E/ B.Sc/ M.Sc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಮತ್ತು ಗರಿಷ್ಟ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments