ಭಾರತದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತದ ಪ್ರಮುಖ ಅಂತಾರಾಷ್ಟ್ರೀಯ ಬ್ಯಾಂಕುಗಳಲ್ಲಿ ಒಂದಾಗಿರುವ ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಒಟ್ಟು 09 ಡೇಟಾ ಸೈಂಟಿಸ್ಟ್ ಮತ್ತು 06 ಡೇಟಾ ಇಂಜಿನಿಯರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 16-11-2021 ರಿಂದ ಆರಂಭವಾಗಿ ದಿನಾಂಕ 06-12-2021 ರೊಳಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಡೇಟಾ ಸೈಂಟಿಸ್ಟ್ ಮತ್ತು ಡೇಟಾ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 01-11-2021 ರ ಅನ್ವಯ ಕನಿಷ್ಟ 25 ವರ್ಷ ಪೂರೈಸಿರಬೇಕು ಮತ್ತು ಗರಿಷ್ಟ 40 ವರ್ಷ ವಯೋಮಿತಿಯೊಳಗಿರಬೇಕು.
SC/ST ಅಭ್ಯರ್ಥಿಗಳಿಗೆ 5 ವರ್ಷ, OBC ಅಭ್ಯರ್ಥಿಗಳಿಗೆ 3 ವರ್ಷ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಡೇಟಾ ಸೈಂಟಿಸ್ಟ್ ಮತ್ತು ಡೇಟಾ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಪ್ರತಿ ತಿಂಗಳಿಗೆ ರೂ 69,180/- ರಿಂದ 89,890/-ರೂಗಳ ವೇತವನ್ನು ಪಡೆಯುವರು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments