ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 37 ಹದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 37 Acquisition & Relationship Manager, Agriculture Marketing Officers ಹುದ್ದೆಗಳನ್ನು 5 ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 26/04/2022 ರೊಳಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 37
Acquisition & Relationship Manager : 11
Agriculture Marketing Officers : 26
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಹುದ್ದೆಗಳಿಗೆ ಅನುಗುಣವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು MBA/ Post Graduate Degree/ Diploma in managemant ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಕನಿಷ್ಠ 25 ವರ್ಷ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನುಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಅನುಭವದ ಆಧಾರದ ಮೇಲೆ ವೇತನವನ್ನು ನೀಡಲಾಗುವುದು. Agriculture Marketing Officers ಹುದ್ದೆಗಳಿಗೆ ವಾರ್ಷಿಕ 15 ರಿಂದ 18 ಲಕ್ಷ ರೂಗಳನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments