ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 157 ರಿಲೇಶನ್ ಶಿಪ್ ಮ್ಯಾನೇಜರ್, ಕ್ರೆಡಿಟ್ ಎನಾಲಿಸ್ಟ್, ಫಾರೆಸ್ Acquisition ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17/05/2023 ರೊಳಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ :157
- Relationship Manager : 66
- Credit Analyst : 74
- Forex Acquisition And Relationship Manager : 17
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 26 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು : 3 ವರ್ಷ
SC/ST ಅಭ್ಯರ್ಥಿಗಳು : 5 ವರ್ಷ
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments