ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 400 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ರಾಷ್ಟ್ರೀಕೃತ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 400 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 01 ಮಾರ್ಚ್ 2025 ಹಾಗೂ ಕೊನೆಯ ದಿನಾಂಕ 15 ಮಾರ್ಚ್ 2025 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ವಿದ್ಯಾರ್ಹತೆ :
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ :
ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 01-03-2025 ರಂತೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷ ವಯಸ್ಸಿನವರಾಗಿರಬೇಕು.
ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
SC/ST ಅಭ್ಯರ್ಥಿಗಳು: 5 ವರ್ಷಗಳು
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿಶುಲ್ಕ :
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ : ₹400/-
SC/ST/ಮಹಿಳಾ ಅಭ್ಯರ್ಥಿಗಳಿಗೆ : ₹600/-
ಇತರ ಎಲ್ಲಾ ಅಭ್ಯರ್ಥಿಗಳಿಗೆ : ₹800/-
ಪಾವತಿ ವಿಧಾನ : ಆನ್‌ಲೈನ್ ಮೂಲಕ
ವೇತನ ಶ್ರೇಣಿ :
ಮಾಸಿಕ ₹12,000/- ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿಸಲ್ಲಿಸುವ ಕ್ರಮಗಳು :
- ಅಧಿಕೃತ ವೆಬ್‌ಸೈಟ್ https://bankofindia.co.in/ ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಥವಾ ಉದ್ಯೋಗಗಳಿಗಾಗಿ ಪರಿಶೀಲಿಸಿ.
- ಅಪ್ರೆಂಟಿಸ್ ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- 15-03-2025 ರೊಳಗೆ ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.
ಪ್ರಮುಖ ದಿನಾಂಕಗಳು :
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-03-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-03-2025
To Download Official Notification
BOI Apprentice Vacancy 2025
Bank of India 400 Apprentice Jobs
BOI Recruitment 2025 Apply Online
How to apply for Bank of India Apprentice Recruitment 2025
BOI 400 Apprentice posts eligibility and selection process
Bank of India Apprentice 2025 online application link
BOI Recruitment 2025 official notification PDF
Bank of India job openings for freshers 2025
BOI Apprentice Notification 2025





Comments