ಬ್ಯಾಂಕ್ ಆಫ್ ಮಹಾರಾಷ್ಟ್ರ (BOM) ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

ಕೇಂದ್ರ ಹಣಕಾಸು ಸಚಿವಾಲಯದ ಅಡಿಯಲ್ಲಿ ಬರುವ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಮಹಾರಾಷ್ಟ್ರ (ಬಿಒಎಂ) ದಲ್ಲಿ ಖಾಲಿ ಇರುವ 100 ಕ್ರೆಡಿಟ್ ಆಫೀಸರ್ ಇನ್ ಸ್ಕೇಲ್ II & III ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ದಿನಾಂಕ 06/11/2023 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 100
1. Credit Officers in Scale-II : 50
2. Credit Officers in Scale-III : 50
* ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ/ಓಬಿಸಿ ಅಭ್ಯರ್ಥಿಗಳು 1,180/-ರೂ ಮತ್ತು
* ಪರಿಶಿಷ್ಟ ಪಂಗಡ/ಪರಿಶಿಷ್ಟ ಜಾತಿ ಅಭ್ಯರ್ಥಿಗಳು 118/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 25 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು.
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 48,170/- ರಿಂದ 78,230/-ರೂಗಳ ವರೆಗೆ ವೇತನವನ್ನು ನೀಡಲಾಗುವುದು
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments