Loading..!

ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ವಿವಿಧ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:20 ಜುಲೈ 2019
not found
ಪ್ರಮುಖ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾದ 'ಬ್ಯಾಂಕ್ ಆಫ್ ಬರೋಡ' ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಐಟಿ ವಿಭಾಗದಲ್ಲಿ ಖಾಲಿ ಇರುವ ಮ್ಯಾನೇಜರ್ ಮತ್ತು ಸೀನಿಯರ್ ಮ್ಯಾನೇಜರ್ ಸೇರಿ 35 ಹುದ್ದೆಗಳಿಗೆ ನೇಮಕ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 2ರೊಳಗೆ ಆನ್ಲೈನ್ ಮೂಲಕ ಕಳುಹಿಸಬಹುದು.

ಮ್ಯಾನೇಜರ್ ಹುದ್ದೆಗಳ ವಿವರ :
* Unix administrator
* Linux administrator
* Windows administrator
* SQL administrator
* Oracle administrator
* Middleware administrator
* Data Center
* ETL Developer
* Software Developer
* Finance Developer

ಸೀನಿಯರ್ ಮ್ಯಾನೇಜರ್ ಹುದ್ದೆಗಳ ವಿವರ :
* ETL Developer
* Software Developer
* Finance Developer
No. of posts:  35
Application Start Date:  15 ಜುಲೈ 2019
Application End Date:  2 ಆಗಸ್ಟ್ 2019
Selection Procedure: ಮೊದಲಿಗೆ ಆನ್ಲೈನ್ ಪರೀಕ್ಷೆ ನಡೆಸಲಾಗುತ್ತದೆ. ಇದರ ಪರೀಕ್ಷೆ ಕೇಂದ್ರವು ರಾಜ್ಯದಲ್ಲಿ ಬೆಂಗಳೂರಿನಲ್ಲಿಯೇ ಇರಲಿದೆ. ಇದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಗ್ರೂಪ್ ಡಿಸ್ಕಶನ್ ಸಂದರ್ಶನ ನಡೆಸಿದ ನೇಮಕ ಮಾಡಿಕೊಳ್ಳಲಾಗುತ್ತದೆ.ಆಯ್ಕೆಯಾದ ಅಭ್ಯರ್ಥಿ ಮುಂಬೈ ಅಥವಾ ಹೈದರಾಬಾದ್ ನಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.ಆದರೆ ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಸಿದ್ದರಿರಬೇಕೆಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
Qualification: ಸಂಬಂಧಪಟ್ಟ ವಿಷಯಗಳಲ್ಲಿ BE/ B.Tech/ BCA/ MCA ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇಕಡ 60 (SC/ST/ ವಿಕಲಚೇತನರು ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಶೇಕಡಾ 55 ) ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕಾದದು ಕಡ್ಡಾಯ.
ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಹುದ್ದೆಗೆ ಸಂಬಂಧಪಟ್ಟಂತೆ ಮೂರು ವರ್ಷ ಮತ್ತು ಸೀನಿಯರ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆರು ವರ್ಷಗಳ ಸೇವಾನುಭವ ಹೊಂದಿರುವುದು ಅವಶ್ಯಕ
Fee: ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ. 600 /- ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ರೂ.100 /- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಆನ್ ಲೈನ್ ನಲ್ಲಿಯೇ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.
Age Limit: ಮ್ಯಾನೇಜರ್ ಹುದ್ದೆಗೆ 25 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಹಾಗೂ ಸೀನಿಯರ್ ಮ್ಯಾನೇಜರ್ ಹುದ್ದೆಗೆ 28 ರಿಂದ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
to download official notification
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments