ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಯಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
Published by: Mallappa Myageri | Date:9 ನವೆಂಬರ್ 2021

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಯ ಆರೋಗ್ಯ ಇಲಾಖೆಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳು, ಹಿರಿಯ ಕ್ಷಯರೋಗಿ ಮೇಲ್ವಿಚಾರಕರು, ಕ್ಷಯರೋಗ ಸಂದರ್ಶಕರು, ಅಕೌಂಟೆಂಟ್, ಕೌನ್ಸಿಲರ್ ಮತ್ತು ಲ್ಯಾಬ್ ಟೆಕ್ನಿಷಿಯನ್ನು ಹೀಗೆ ಒಟ್ಟು 30 ಹುದ್ದೆಗಳನ್ನು ನೇಮಕಾತಿಗಾಗಿ ನೇರ ಸಂದರ್ಶನ ನಡೆಸಲಾಗುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ದಿನಾಂಕ : 17-11-2021 ಮತ್ತು 18-11-2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಸೂಚಿಸಿದೆ.
No. of posts: 30
Application Start Date: 17 ನವೆಂಬರ್ 2021
Application End Date: 18 ನವೆಂಬರ್ 2021
Qualification: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಬೋರ್ಡ್ ದಿಂದ MBBS, Diploma/MD, Degree ಮತ್ತು PUC ವಿವಿಧ ವಿದ್ಯಾರ್ಹತೆಯನ್ನು ಹೊಂದಿರತಕ್ಕದು.
Age Limit:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿಯನ್ನು ಹೊಂದಿರತಕ್ಕದ್ದು.
ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ
ಪ್ರವರ್ಗ-2A, 2B, 3A ಮತ್ತು 3B ಅಭ್ಯರ್ಥಿಗಳಿಗೆ ಕನಿಷ್ಟ 18 ರಿಂದ ಗರಿಷ್ಟ 38 ವರ್ಷ ಮತ್ತು
SC/ST/CAT-1ರ ಅಭ್ಯರ್ಥಿಗಳಿಗೆ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರಾಗಿರುತ್ತಾರೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, KA,





Comments