ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಗ್ರೂಪ್- D ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ940 ಗ್ರೂಪ್-ಡಿ, ವೈಧಿಕಾರಿಗಳು, ಶುಶ್ರೋಷಕರು, ಪ್ರಯೋಗಶಾಲಾ ತಂತ್ರಜ್ಞರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ10/08/2022 ಮತ್ತು11/08/2022 ರಂದು 10:30 ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ನೌಕರರ ಭವನ ಸಭಾಂಗಣ ಬಿಬಿಎಂಪಿ, ಕೇಂದ್ರ ಕಚೇರಿ, ಎನ್.ಆರ್. ಚೌಕ
ಹುದ್ದೆಗಳ ವಿವರ : 940
- ವೈಧಿಕಾರಿಗಳು : 235
- ಶುಶ್ರೋಷಕರು : 235
- ಪ್ರಯೋಗಶಾಲಾ ತಂತ್ರಜ್ಞರು : 235
- ಗ್ರೂಪ್-ಡಿ : 235
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ರೂ.10,500- 47,250/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments