ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:26 ಆಗಸ್ಟ್ 2023

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 10 ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳನ್ನು 11 ತಿಂಗಳ ಅವಧಿಯವರೆಗೆ ಗುತ್ತಿಗೆ ಆಧಾರದಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 08/09/2023 ರಂದು ಸಂಜೆ 04:00 ಗಂಟೆಯೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 10
- ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಕನ್ಸಲ್ಟೆಂಟ್ ಗ್ರೇಡ್ 1 : 2
- ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಕನ್ಸಲ್ಟೆಂಟ್ ಗ್ರೇಡ್ 2 : 8
No. of posts: 10
Application Start Date: 25 ಆಗಸ್ಟ್ 2023
Application End Date: 8 ಸೆಪ್ಟೆಂಬರ್ 2023
Work Location: ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Diploma/ MSW/ Engineering/ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 58 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Pay Scale:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ರೂ.60,000- 70,000/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments