ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 49 ಅರೆವೈದ್ಯಕೀಯ ಕೆಲಸಗಾರ, ನರ್ಸ್, ಝೋನಲ್ ಅಕೌಂಟ್ಸ್ ಮ್ಯಾನೇಜರ್, ವೈದ್ಯಕೀಯ ಅಧಿಕಾರಿ ಮತ್ತು RBSK ವೈದ್ಯಕೀಯ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
- ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 01/03/2023 ರಿಂದ 03/03/2023 ವರೆಗೆ 10:30 ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Dr. Rajakumar Glass House, BBMP Head Office, N.R.square, Banagalore-560002
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ರೂ.13,000- 63,000/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments