ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 31 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಸಂದರ್ಶನ ನಡೆಯುವ ದಿನಾಂಕ :
ಆಯುರ್ವೇದ ವಿಭಾಗದ ಹುದ್ದೆಗಳು : 17/4/2022
ಕನ್ಸಲ್ಟಂಟ್ ಹುದ್ದೆಗಳು : 10/04/2022
ಡೆವಲಪರ್ ಹುದ್ದೆಗಳು : 17/04/2022 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.
ಹುದ್ದೆಗಳ ವಿವರ : 31
ಆಯುರ್ವೇದ ವಿಭಾಗ : 26
ಕನ್ಸಲ್ಟಂಟ್ : 03
ಡೆವಲಪರ್ : 02
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮೀಸಲಾತಿ ಅನ್ವಯ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು S.S.L.C/ PUC/ B.Pharm/ ITI Diploma/ಆಯುರ್ವೇದಲ್ಲಿ ಉನ್ನತ ಪದವಿ, ಪಂಚಕರ್ಮದಲ್ಲಿ MD/ B.Sc/ B.E/ B.Tech ಪದವಿಯನ್ನು ಉತ್ತೀರ್ಣರಾಗಿರಬೇಕು. ವೃತ್ತಿ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ.750/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.450/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 30 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 63 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 16,000/- ರಿಂದ 75,000/- ವರೆಗೆ ಗೌರವಧನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments