ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 72 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05/12/2022 ದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ 10/12/2022 ರಂದು ನಡೆಯುವ ನೇರ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Committee Room,, Administrative Block,
Pharmacoeia Commission For Indian Medicine & Homoeopathy (PCIM&H),
Ministry Of Ayush, Kamal Neharu Nagar,
Ghaziabad, Uttar Pradesh – 201002
ಈ ಹುದ್ದೆಗಳಿಗೆ ಸಂಸ್ಥೆಯ ನಿಯಮಗಳ ಅನುಸಾರವಾಗಿ ಮತ್ತು ಕೆಲಸದ ಅವಶ್ಯಕತೆಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
ಸ್ಥಳೀಯ ಅಭ್ಯರ್ಥಿಗಳಿಗೆ ಮತ್ತು ಈಗಾಗಲೇ ಅದೇ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವವರಿಗೆ ಮೊದಲ ಆದ್ಯತೆ ನೀಡಲಾಗುವದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಡ್ರೈವರ್ ಮತ್ತು ಸೆಕ್ಯೂರಿಟಿಯಂತಹ ಹುದ್ದೆಗಳಿಗೆ SSLC ಯಲ್ಲಿ ಉತ್ತೀರ್ಣರಾಗಿರಬೇಕು.
ಹೌಸ್ ಕೀಪಿಂಗ್ ಸ್ಟಾಫ್ ಗಳಂತಹ ಹುದ್ದೆಗಳಿಗೆ 5 ನೇ ತರಗತಿ ಓದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಈ ಕೆಳಗೆ ಕೊಟ್ಟಿರುವ ಸೂಚನೆಯಂತೆ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸತಕ್ಕದ್ದು.
ಸಾಮಾನ್ಯ ವರ್ಗ, ಒಬಿಸಿ, ಮಾಜಿ ಸೈನಿಕ ಅಭ್ಯರ್ಥಿಗಳು ರೂ.885/- ಅರ್ಜಿ ಶುಲ್ಕ ಪಾವತಿಸಬೇಕು.
SC, ST , EWS ಅಭ್ಯರ್ಥಿಗಳು ರೂ 531/- ಅರ್ಜಿ ಶುಲ್ಕ ವನ್ನು ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 30 ವರ್ಷ ಹಾಗೂ ಗರಿಷ್ಟ 65 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ 16,425/- ರಿಂದ 50,000/- ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments