ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್‌ಟಂಟ್ಸ್ ಇಂಡಿಯಾ ಲಿಮಿಟೆಡ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ | ಕೂಡಲೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಬರುವ ಮಿನಿ ರತ್ನ ಸಂಸ್ಥೆಯಲ್ಲಿ ಒಂದಾಗಿರುವ ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್‌ಟಂಟ್ಸ್ ಇಂಡಿಯಾ ಲಿಮಿಟೆಡ್ ದಲ್ಲಿ ಖಾಲಿ ಇರುವ 500 ತನಿಖಾಧಿಕಾರಿ(ಇನ್ವೆಸ್ಟಿಗೇಟರ್) ಮತ್ತು ಮೇಲ್ವಿಚಾರಕ (ಸೂಪರ್‌ವೈಸರ್) ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ 25/01/2022 ರೊಳಗೆ ಅರ್ಜಿ ಸಲ್ಲಿಸಿ
ಹುದ್ದೆಯ ವಿವರ: 500
* ತನಿಖಾಧಿಕಾರಿ - 350
* ಮೇಲ್ವಿಚಾರಕ - 150
Note: ಅಭ್ಯರ್ಥಿಗಳು ಅಪ್ಲಿಕೇಶನ್ ಅನ್ನು ಇ-ಮೇಲ್ projecthr@becil.comಗೆ ಕಳುಹಿಸಬೇಕು. ಇತರೆ ಯಾವುದೇ ಮಾರ್ಗದಲ್ಲಿ ಅರ್ಜಿ ಸ್ವೀಕರಿಸಲಾಗುವುದಿಲ್ಲ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಹಾಗೂ ಸಂದರ್ಶನ ದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಯಾವುದೇ ಪದವಿ ಜತೆಗೆ, ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯವಾಗಿದೆ.
ಮೀಸಲಾತಿಗಳಿಗನುಗುಣವಾಗಿ ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
- General / OBC / - Rs. 500/-
- SC/ST /EWS/PH - Rs.350/-
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 50 ವರ್ಷ ವಯೋಮಿತಿಯನ್ನು ಮೀರಿರಬಾರದು.

Comments