ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 100 ನರ್ಸಿಂಗ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17 ಸೆಪ್ಟೆಂಬರ್ 2024 ದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರದಂತೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಲಾಸ್ :
Broadcast Engineering Consultants India Limited (BECIL)
BECIL Bhawan,
C-56/A-17, Sector-62,
Noida-201307, U.P
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ Dilpoma / B.Sc. ಹಾಗೂ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 590/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. SC/ST/EWS ಅಭ್ಯರ್ಥಿಗಳಿಗೆ 295/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.





Comments