ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 170 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್( BECIL)ನಲ್ಲಿ ಖಾಲಿ ಇರುವ170 ನರ್ಸಿಂಗ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆಯನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ:
Broadcast Engineering Consultants India Limited (BECIL)
BECIL Bhawan, C-56/A-17, Sector-62,
Noida-201307, U.P
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 32 ವರ್ಷ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ₹28000/- ರೂ ಗಳ ವೆರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments