ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ02 ವೈದ್ಯಕೀಯ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 29-04-2024 ಹಾಗೂ ಕೊನೆಯ ದಿನಾಂಕ 05-05-2024 ದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಿಯಮಾನುಸಾರದಂತೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಯಾವುದೇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 25,000/- ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments