ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)ನಲ್ಲಿ ಒಟ್ಟು 91 ಹುದ್ದೆಗಳನ್ನು ಭರ್ತಿ ಮಾಡಲು SSLC, DIPLOMA ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(BEL), ಒಂದು ನವರತ್ನ ಮತ್ತು ಭಾರತದ ಪ್ರಮುಖ ವೃತ್ತಿಪರ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ಬೆಂಗಳೂರು ಘಟಕಕ್ಕೆ ಖಾಯo ಆಧಾರದ ಮೇಲೆ ಖಾಲಿ ಇರುವ ಇಂಜಿನಿಯರ್ ಅಸಿಸ್ಟೆಂಟ್ ಟ್ರೇನಿ, ಟೆಕ್ನಿಷಿಯನ್ ಸಿ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ವೃತ್ತಿ ಅನುಭವ ಬೇಕಿಲ್ಲ ಹೊಸಬರಿಗೂ ಅವಕಾಶ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/04/2022 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 91
* Engineering Assistant Trainee : 66
* Technician ‘C’ : 25
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷಗಳ ವಯೋಮಿತಿಯ
- ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ವಯೋಮಿತಿಯ ಸಡಿಲಿಕೆಯನ್ನು ನೀಡಲಾಗುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನ ನೀಡಲಾಗುವುದು.
* Engineering Assistant Trainee : 24,500/- ರಿಂದ 90,000/-
* Technician ‘C’ : 21,500/- ರಿಂದ 82,000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments