ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ 43 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/06/2022 ರೊಳಗೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
Manager Barat Electronics Limited, Jalahalli Post, Bengaluru-56001
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 3 ವರ್ಷಗಳು
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು
- PWBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ 40,000/- ರಿಂದ 55,000/-ರೂಗಳ ವೇತನವನ್ನು ನಿಗದಿಪಡಿಸಲಾಗಿದೆ. ಜೊತೆಗೆ ರೂ ಇತರ ಭತ್ಯೆಯನ್ನು ನೀಡಲಾಗುವುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments