ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ 34 ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೈನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/10/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 34
- ಟ್ರೇನಿ ಇಂಜಿನಿಯರಿಂಗ್ - 32
- ಪ್ರಾಜೆಕ್ಟ್ ಇಂಜಿನಿಯರಿಂಗ್ - 28
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು
- ಟ್ರೇನಿ ಇಂಜಿನಿಯರಿಂಗ್ ಹುದ್ದೆಗಳಿಗೆ 472/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- ಪ್ರಾಜೆಕ್ಟ್ ಇಂಜಿನಿಯರಿಂಗ್ ಹುದ್ದೆಗಳಿಗೆ 177/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- SC ST ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ 45,000/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ. ಜೊತೆಗೆಇತರ ಭತ್ಯೆಯನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments