ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ.

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ 247 ಪ್ರಾಜೆಕ್ಟ್ ಇಂಜಿನಿಯರ್, ಟ್ರೈನಿ ಇಂಜಿನಿಯರ್ ಮತ್ತು ಟ್ರೈನಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ 04, ಫೆಬ್ರವರಿ,2022ರೊಳಗೆ ಅರ್ಜಿಯನ್ನು ಹಾಕಬಹುದು.
ಹುದ್ದೆಗಳ ವಿವರ : 247
* ಟ್ರೈನಿ ಇಂಜಿನಿಯರ್ - 169
* ಪ್ರಾಜೆಕ್ಟ್ ಇಂಜಿನಿಯರ್ - 67
* ಟ್ರೈನಿ ಆಫೀಸರ್ - 11
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ
ಪ್ರಾಜೆಕ್ಟ್ ಇಂಜಿನಿಯರ್, ಟ್ರೈನಿ ಇಂಜಿನಿಯರ್ ಮತ್ತು ಟ್ರೈನಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು B.E/B.Tech/B.Sc/MBA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
- Project Engineer – ರೂ. 500/-
- Trainee Engineer & Trainee Officer (Finance) – ರೂ. 200/-
- ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 1,2022ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿರಬೇಕು.
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ,
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
- Project Engineer – 55,000/-
- Trainee Engineer & Trainee Officer (Finance) – 40,000/- ರೂ ವೇತನವನ್ನು ನಿಗದಿಪಡಿಸಲಾಗಿದೆ
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

Comments