Loading..!

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:6 ಅಕ್ಟೋಬರ್ 2023
not found

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ 232 ಪ್ರೊಬೆಷನರಿ ಇಂಜಿನಿಯರ್, ಪ್ರೊಬೆಷನರಿ ಆಫೀಸರ್, ಮತ್ತು ಪ್ರೊಬೆಷನರಿ ಅಕೌಂಟ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/10/2023 ರೊಳಗೆ  ಅರ್ಜಿಯನ್ನು ಸಲ್ಲಿಸಬಹುದು. 

ಹುದ್ದೆಗಳ ವಿವರ : 232
1 ಪ್ರೊಬೆಷನರಿ ಇಂಜಿನಿಯರ್ : 205
2 ಪ್ರೊಬೆಷನರಿ ಆಫೀಸರ್ : 12
3 ಪ್ರೊಬೆಷನರಿ ಅಕೌಂಟ್ಸ್ : 15

No. of posts:  232
Application Start Date:  6 ಅಕ್ಟೋಬರ್ 2023
Application End Date:  28 ಅಕ್ಟೋಬರ್ 2023
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಶಾರ್ಟ್‌ಲಿಸ್ಟ್ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು  B.E/ B. Tech/ CA/ B.Scವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ. ಕನಿಷ್ಟ ಒಂದು ವರ್ಷದ ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗ ಮತ್ತು ಇತರ ವರ್ಗದ ಅಭ್ಯರ್ಥಿಗಳಿಗೆ 1,180/- ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 25ವರ್ಷಗಳ ವಯೋಮಿತಿಯನ್ನು ಮೀರಿರಬಾರದು,
OBC ಅಭ್ಯರ್ಥಿಗಳು 3 ವರ್ಷ 
SC/ST ಅಭ್ಯರ್ಥಿಗಳು 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download the official notification
Related Tags: Engineering

Comments