ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ 10 ಹಿರಿಯ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ19 ನವೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ:
Assistant Manager – Human Resources, Bharat Electronics Limited,
Milcom & NWCS-SBU, Jalahalli Post, Bengaluru-560013
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.E/ B.Tech/ M.E/ M.Tech ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಸಾಮಾನ್ಯ ಮತ್ತು OBC ಅಭ್ಯರ್ಥಿಗಳು Rs.708/-
SC/ ST/ PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 32 ವರ್ಷ ವಯೋಮಿತಿಗಳನ್ನು ಮೀರಿರಬಾರದು.'
ವಯೋಮಿತಿ ಸಡಿಲಿಕೆ:
SC/ST/Cat-1 ಅಭ್ಯರ್ಥಿಗಳಿಗೆ: 05 ವರ್ಷಗಳು
2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
PWD ಅಭ್ಯರ್ಥಿಗಳಿಗೆ: 10 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 50,000/- ರೂಗಳಿಂದ 1,60,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments