ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ 19 ಸಹಾಯಕ ವ್ಯವಸ್ಥಾಪಕ (HR), ಪ್ರೊಬೇಷನರಿ ಅಧಿಕಾರಿ (HR), ಸಹಾಯಕ ವ್ಯವಸ್ಥಾಪಕ (ಕಾನೂನು) ಮತ್ತು ಹಿರಿಯ ಸಹಾಯಕ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 30 ಅಕ್ಟೋಬರ್ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 19
ಸಹಾಯಕ ವ್ಯವಸ್ಥಾಪಕ (HR) - 6
ಪ್ರೊಬೇಷನರಿ ಅಧಿಕಾರಿ (HR) - 5
ಸಹಾಯಕ ವ್ಯವಸ್ಥಾಪಕ (ಕಾನೂನು) -3
ಪ್ರೊಬೇಷನರಿ ಅಧಿಕಾರಿ (ಕಾನೂನು) - 3
ಹಿರಿಯ ಸಹಾಯಕ ಅಧಿಕಾರಿ - 2
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಡಿಪ್ಲೋಮಾ LLB, BL, MBA, MSW ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- ಅಸಿಸ್ಟೆಂಟ್ ಮ್ಯಾನೇಜರ್, ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ : ಸಾಮಾನ್ಯ ಮತ್ತು OBC ಅಭ್ಯರ್ಥಿಗಳು Rs.600/-
SC/ ST/ PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
- ಹಿರಿಯ ಸಹಾಯಕ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯೋಮಿತಿಗಳನ್ನು ಮೀರಿರಬಾರದು.'
ವಯೋಮಿತಿ ಸಡಿಲಿಕೆ:
SC/ST/Cat-1 ಅಭ್ಯರ್ಥಿಗಳಿಗೆ: 05 ವರ್ಷಗಳು
2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
PWD ಅಭ್ಯರ್ಥಿಗಳಿಗೆ: 10 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 30000/- ರೂ ಗಳಿಂದ 160000/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments