ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ 21 ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ.
ವಿದ್ಯಾರ್ಹತೆ :
B.E / B.Tech ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಅಭ್ಯರ್ಥಿಗಳು ಕನಿಷ್ಠ 2 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.
ವಯೋಮಿತಿ :
ಗರಿಷ್ಠ 32 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿಯಲ್ಲಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 3 ವರ್ಷ
SC/ST ಅಭ್ಯರ್ಥಿಗಳಿಗೆ: 5 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ :
ಸಾಮಾನ್ಯ/OBC/EWS ಅಭ್ಯರ್ಥಿಗಳು : ರೂ. 472/-
SC/ST/PwBD ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು : ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ : ಲೇಖಿತ ಪರೀಕ್ಷೆ ಮತ್ತು ಸಂದರ್ಶನ
ವೇತನ ಶ್ರೇಣಿ :
1st Year: Rs. 40,000/-
2nd Year: Rs. 45,000/-
3rd Year: Rs. 50,000/-
4th year: Rs. 55,000/-
ಅರ್ಜಿ ಸಲ್ಲಿಸುವ ವಿಧಾನ :
1 BEL ಅಧಿಕೃತ ಅಧಿಸೂಚನೆಯನ್ನು ಗಮನದಿಂದ ಓದಿ.
2 ಅರ್ಜಿ ಸಲ್ಲಿಸುವ ಮೊದಲು, ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ.
3 BEL ಅಧಿಕೃತ ವೆಬ್‌ಸೈಟ್ (bel-india.in) ಮೂಲಕ ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡಿ. ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
4 ಅರ್ಜಿ ಶುಲ್ಕವನ್ನು (ಅಗತ್ಯವಿದ್ದರೆ) SBI Collect ಮೂಲಕ ಪಾವತಿಸಿ.
5 ಅಂತಿಮವಾಗಿ ಅರ್ಜಿಯನ್ನು ಸಲ್ಲಿಸಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯನ್ನು ಸಂರಕ್ಷಿಸಿ.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 2025 ಏಪ್ರಿಲ್ 26
ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸಲು, BEL ಅಧಿಕೃತ ವೆಬ್‌ಸೈಟ್ (bel-india.in) ಗೆ ಭೇಟಿ ನೀಡಿ.
Comments