ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ 83 ಗ್ರಾಜುವೇಟ್ ಅಪ್ರೆಂಟಿಸ್, ಟೆಕ್ನಿಷಿಯನ್(ಡಿಪ್ಲೋಮ) ಅಪ್ರೆಂಟಿಸ್ ಮತ್ತು B.Com ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 20, 21, 22 ಜನವರಿ 2025 ರಂದು ಬೆಳಿಗ್ಗೆ 09:30 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವಾಗ ಭರ್ತಿ ಮಾಡಿದ ಅರ್ಜಿ ಮತ್ತು ಮೂಲ ದಾಖಲೆಗಳ ಜೊತೆಗೆ ಸಂದರ್ಶನಕ್ಕೆ ಹಾಜರಾಗಬೇಕಾಗಿರುತ್ತದೆ.
ಸಂದರ್ಶನ ನಡೆಯುವ ಸ್ಥಳ :
BHARAT ELECTRONICS LIMITED
NANDAMBAKKAM
CHENNAI - 600 089
ಹುದ್ದೆಗಳ ವಿವರ : 83
Graduate Apprentices : 63
Technician (Diploma) Apprentices : 10
B.Com Apprentices : 10
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 25 ವರ್ಷ ವಯೋಮಿತಿಗಳನ್ನು ಮೀರಿರಬಾರದು.'
ವಯೋಮಿತಿ ಸಡಿಲಿಕೆ:
SC/ST/Cat-1 ಅಭ್ಯರ್ಥಿಗಳಿಗೆ: 05 ವರ್ಷಗಳು
2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
PWD ಅಭ್ಯರ್ಥಿಗಳಿಗೆ: 10 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
Graduate Apprentices : Rs.17,500/-
Technician (Diploma) Apprentices : Rs.15,500/-
B.Com Apprentices : Rs.15,500/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments