ಬೆಳಗಾವಿ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ

ಬೆಳಗಾವಿ ಜಿಲ್ಲೆಯ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವಅರವಳಿಕೆ, ಸ್ತ್ರೀರೋಗ ಮತ್ತು ಚಿಕ್ಕ ಮಕ್ಕಳ ತಜ್ಞ ವೈದ್ಯ ಹುದ್ದೆಗಳನ್ನೊಳಗೊಂಡಂತೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 23/01/2023 ರಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸುವದಾಗಿದೆ.
ಹುದ್ದೆಗಳ ವಿವರ : 37
ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು - 23
ಅರವಳಿಕೆ ತಜ್ಞ ವೈದ್ಯರು - 05
ಸ್ತ್ರೀ ರೋಗ ತಜ್ಞ ವೈದ್ಯರು - 02
ಚಿಕ್ಕ ಮಕ್ಕಳ ತಜ್ಞ ವೈದ್ಯರು - 07
ಸಂದರ್ಶನ ನಡೆಯುವ ಸ್ಥಳ : ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ,
ಲಸಿಕಾ ಸಂಸ್ಥೆ ಆವರಣ, ರೇಲ್ವೆ 2ನೇ ಗೇಟ್, ಟಿಳಕವಾಡಿ, ಬೆಳಗಾವಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MBBS/ DA/ /DNB /MD /DGO /DCH ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು.
ವೃತ್ತಿಯ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸಂದರ್ಶನ ದಿನಾಂಕಕ್ಕೆ ನಿಗದಿ ಪಡಿಸಿದಂತೆ 42 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಇತರೆ ಹಿಂದುಳಿದ ಅಭ್ಯರ್ಥಿಗಳು 45 ವರ್ಷ
SC ಹಾಗೂ ST ಅಭ್ಯರ್ಥಿಗಳು 47 ಹಾಗೂ
ನಿವೃತ್ತಿ ಹೊಂದಿದ ಅಭ್ಯರ್ಥಿಗಳು 65 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಮಾಸಿಕ ವೇತನ 60,000/- ರೂ ನಿಗದಿಪಡಿಸಲಾಗಿದೆ. ತಜ್ಞ ವೈದ್ಯರುಗಳ ಹುದ್ದೆಗಳಿಗೆ ನಿರ್ದೇಶನಾಲಯ ನಿಗದಿಪಡಿಸಿದಂತೆ ವೇತನ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments