ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು ಹುದ್ದೆಗಳ ನೇರ ನೇಮಕಾತಿ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:25 ಜುಲೈ 2023

ಬೆಳಗಾವಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬೆಳಗಾವಿ ಘಟಕದಲ್ಲಿ ಖಾಲಿ ಇರುವ 13 ಶೀಘ್ರಲಿಪಿಗಾರರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ21/08/2023 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 21/07/2023
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21/08/2023
- ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ : 24/08/2023
No. of posts: 13
Application Start Date: 21 ಜುಲೈ 2023
Application End Date: 21 ಆಗಸ್ಟ್ 2023
Selection Procedure: ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದಮೇಲೆ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಿ.ಯು.ಸಿ. ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 300/- ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿರುತ್ತದೆ, ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ಇರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಳಗಾವಿ ಜಿಲ್ಲಾ, KA,
To Download Official Notification
Related Tags: PUC





Comments