ಬೆಳಗಾವಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ

ಬೆಳಗಾವಿ ಜಿಲ್ಲೆಯ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ ಮತ್ತು ಸಮುದಾಯ ಅರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 21 ತಜ್ಞ ವೈದ್ಯರು, ವೈದ್ಯರು, ಶುಶೃಷಕ/ಕಿ ಅಧಿಕಾರಿಗಳು, ಆಪ್ತ ಸಮಾಲೋಚಕರು, ಮತ್ತು ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿಗಳು ಸೇರಿದಂತೆ ವಿವಿಧ ಹುದ್ದೆಗಳಿಗೆ ಆಯ್ಕೆ ಮಾಡಲು ಅರ್ಹ ಆಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 03 ಆಗಸ್ಟ್ 2024 ಸಂಜೆ 5.30 ಗಂಟೆಯೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
District N.C.D Unit Vaccination Institute Premises,
Tilakawadi, Belagavi-590006, Karnataka
ಹುದ್ದೆಗಳ ವಿವರ : 21
ತಜ್ಞ ವೈದ್ಯರು - 02
ವೈದ್ಯರು - 03
ಶುಶೃಷಕ/ಕಿ ಅಧಿಕಾರಿಗಳು - 13
ಆಪ್ತ ಸಮಾಲೋಚಕರು - 02
ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿಗಳು - 01
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು MBBS, M.D, Diploma, B.Sc, PUC ಮತ್ತು ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕಾಗುತ್ತದೆ.
- ಈ ಹುದ್ದೆಗಳಿಗೆ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ :
Cat-I/2A/2B/3A/3B ಅಭ್ಯರ್ಥಿಗಳು: 03 Years
SC/ST ಅಭ್ಯರ್ಥಿಗಳು: 05 Years
- ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುವುದು.
ತಜ್ಞ ವೈದ್ಯರು - 1,10,000/-
ವೈದ್ಯರು - 46,200/-
ಶುಶೃಷಕ/ಕಿ ಅಧಿಕಾರಿಗಳು - 13,225/-
ಆಪ್ತ ಸಮಾಲೋಚಕರು - 15,939/-
ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿಗಳು - 16,100/-
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments