ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ

ಬೆಳಗಾವಿ ಜಿಲ್ಲೆಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಾಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಕಚೇರಿಯಲ್ಲಿ ಖಾಲಿ ಇರುವ ಮನೋವೈದ್ಯ ಮತ್ತು ಮನೋವೈದ್ಯ ನರ್ಸ್ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 16/06/2023 ರಂದು ಬೆಳ್ಳಿಗೆ 10:30 ಮಧ್ಯಾಹ್ನ 01:00 ವರೆಗೆ ನಡೆಯುವ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ವಿಳಾಸ :
ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಲಸಿಕಾ ಸಂಸ್ಥೆ ತಿಲಕವಡ, ಬೆಳಗಾವಿ.
ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MD/ DPM/ B.Sc Nursing ವಿದ್ಯಾರ್ಹತೆಯನ್ನು ಕನಿಷ್ಠ 55% ದೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು.
- ವೃತ್ತಿಯ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಗೌರವ ಧನವಾಗಿ ಪ್ರತಿ ತಿಂಗಳು 1,10,000 /- ರೂ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments