ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ (BSCL) ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನ
Published by: Basavaraj Halli | Date:21 ಜನವರಿ 2020

ಬೆಳಗಾವಿಯ ಸ್ಮಾರ್ಟ್ ಸಿಟಿ ಲಿಮಿಟೆಡ್(BSCL)ನ ಮಾನ್ಯ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಈ ಕೆಳಗೆ ವಿವರಿಸಿರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ : ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಸಿವಿಲ್) ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ವಿದ್ಯುತ್) ಕಿರಿಯ ನಗರ ಯೋಜಕರು ವ್ಯವಸ್ಥಾಪಕರು (ಸಾಫ್ಟವೇರ್) ಒಟ್ಟು ಹುದ್ದೆಗಳ ಸಂಖ್ಯೆ: 04 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 28 ಜನವರಿ 2020 ಕೊನೆಯ ದಿನಾಂಕವಾಗಿರುತ್ತದೆ. ಈ ಹುದ್ದೆಗಳಿಗೆ ಬೇಕಾದ ವಿದ್ಯಾರ್ಹತೆ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಈ ನೇಮಕಾತಿ ಅಧಿಸೂಚನೆಯ ಅಧಿಕೃತ ಅಧಿಸೂಚನೆಯನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಂಡು ಈ ನೇಮಕಾತಿಯ ಹೆಚ್ಚಿನ ವಿವರಗಳನ್ನು ಅಭ್ಯರ್ಥಿಗಳು ಪಡೆದು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿಧಾನ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬೇಕಾದ ಎಲ್ಲ ಮೂಲ ದಾಖಲಾತಿಗಳ ನಕಲು ಪ್ರತಿಯೊಂದಿಗೆ ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅಂಚೆ / ಕೊರಿಯರ್ ಅಥವಾ ಖುದ್ದಾಗಿ ಹಾಜರಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಬೇಕಾದ ವಿಳಾಸ : ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ (BSCL), ಆಫೀಸ್ ಆಫ್ ದಿ ಮ್ಯಾನೇಜಿಂಗ್ ಡೈರೆಕ್ಟರ್, 1st ಫ್ಲೋರ್, BUDA ಆಫೀಸ್, ಅಶೋಕ ನಗರ, ಬೆಳಗಾವಿ - 590016. Phone- 0831-2461352/2474166
No. of posts: 4
Application Start Date: 21 ಜನವರಿ 2020
Application End Date: 28 ಜನವರಿ 2020
Work Location: ಬೆಳಗಾವಿ
Employment Type: FULL_TIME
Hiring Organization: KPSC Vaani https://www.kpscvaani.com
Job Location: ಬೆಳಗಾವಿ, KA,





Comments