ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಮಾಲೀಕತ್ವದಲ್ಲಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ40 ಚೀಫ್ ಜನರಲ್ ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್, ಅಸಿಸ್ಟಂಟ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಮತ್ತು ಆಕ್ಸಿ ಕ್ಯೂಟೀವ್ ಡೈರೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಮೌಲ್ಯಮಾಪನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸಿದ ನಂತರ ಹಾರ್ಡ್ ಕಾಪಿಯನ್ನು ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ವಿಳಾಸ:
Senior Manager (HR)
Recruitment Cell
BEML Soudha
No 23/1, 4th Main, S R Nagar
Bangalore – 560027
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ. ಮೀಸಲಾತಿ ವರ್ಗದವರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ ಕನಿಷ್ಠ 30 ವರ್ಷಗಳು ಮತ್ತು ಗರಿಷ್ಠ 54 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ50,000/- ರೂ ಗಳಿಂದ 3,00,000/- ರೂ ಗಳ ವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments