ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಮಾಲೀಕತ್ವದಲ್ಲಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 16 ಸಹಾಯಕ ಮ್ಯಾನೇಜರ್ ಮತ್ತು ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 04, 05 ಜನವರಿ 2025 ಮತ್ತು 19, 20 ಜನವರಿ 2025 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾದ ಅಧಿಕೃತ ಅಧಿಸೂಚನೆಯ ಮೂಲಕ ಪಡೆಯಬಹುದಾಗಿದೆ.
ಸಂದರ್ಶನ ದಿನಾಂಕ : 04 & 05.01.2025
ಸಂದರ್ಶನ ನಡೆಯುವ ಸ್ಥಳ :
Pune (BSNL Bhavan, 2nd Floor, Model Colony, Shivajinagar 411016)
ಸಂದರ್ಶನ ದಿನಾಂಕ : 19 & 20.01.2025
ಸಂದರ್ಶನ ನಡೆಯುವ ಸ್ಥಳ :
Chennai (No.10 Supriya Estate, Sterling Rd, Seetha Nagar, Nungambakkam, 600034)
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ50,000/- ರೂ ಗಳಿಂದ 1,80,000/- ರೂ ಗಳ ವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments