ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಉದ್ಯೋಗಾವಕಾಶ: ಸಹಾಯಕ ಗ್ರಂಥಪಾಲಕರು, ಲೈಬ್ರರಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಂದೇ ಅರ್ಜಿ ಸಲ್ಲಿಸಿ
ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಸಿಕ್ಕಿದೆ. ಡಾ. ಮನ್ಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ (Bengaluru City University) ಖಾಲಿ ಇರುವ ಸಹಾಯಕ ಗ್ರಂಥಪಾಲಕರು (Assistant Librarian) ಹಾಗೂ ಲೈಬ್ರರಿ ಅಪ್ರೆಂಟಿಸ್ ತರಬೇತುದಾರ (Library Apprentice Trainee) ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ.
ಈ ಅವಕಾಶವು ವಿಶೇಷವಾಗಿ ಗ್ರಂಥಾಲಯ ವಿಜ್ಞಾನ (Library & Information Science) ಹಿನ್ನೆಲೆ ಹೊಂದಿರುವ ಯುವಕರಿಗೆ ಸರ್ಕಾರಿ ಸಂಸ್ಥೆಯಲ್ಲಿ ಅನುಭವ ಗಳಿಸಲು ಹಾಗೂ ಮುಂದಿನ ವೃತ್ತಿಜೀವನಕ್ಕೆ ಬಲವಾದ ಅಡಿಪಾಯ ಹಾಕಿಕೊಳ್ಳಲು ಸಹಾಯಕವಾಗಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆಫ್‌ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಯ ಕುರಿತಾದ ಸಂಪೂರ್ಣ ಮಾಹಿತಿ, ವಿದ್ಯಾರ್ಹತೆ ಮತ್ತು ಅರ್ಜಿ ಸಲ್ಲಿಸುವ ವಿಧಾನವನ್ನು ಕೆಳಗೆ ನೀಡಲಾಗಿದೆ.
ನೇಮಕಾತಿಯ ಪ್ರಮುಖ ವಿವರಗಳು:
ನೇಮಕಾತಿ ಸಂಸ್ಥೆ: ಡಾ. ಮನ್ಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ
ಹುದ್ದೆಯ ಹೆಸರು : ಸಹಾಯಕ ಗ್ರಂಥಪಾಲಕರು & ಲೈಬ್ರರಿ ಅಪ್ರೆಂಟಿಸ್ ಟ್ರೈನಿ
ಒಟ್ಟು ಹುದ್ದೆಗಳು : 10
ಉದ್ಯೋಗ ಸ್ಥಳ : ಬೆಂಗಳೂರು, ಕರ್ನಾಟಕ
ವೇತನ ಶ್ರೇಣಿ : ಪ್ರತಿ ತಿಂಗಳಿಗೆ ₹17,000 ರಿಂದ ₹25,500/-
ಅರ್ಜಿ ವಿಧಾನ : ಆಫ್‌ಲೈನ್ (Offline)
ಹುದ್ದೆಗಳ ಹಂಚಿಕೆ & ವೇತನ ಶ್ರೇಣಿ :
1. ಸಹಾಯಕ ಗ್ರಂಥಪಾಲಕರು (Assistant Librarian)- 03 - ₹25,500/-
2. ಲೈಬ್ರರಿ ಅಪ್ರೆಂಟಿಸ್ ತರಬೇತುದಾರ (Library Apprentice Trainee)- 07 - ₹17,000/-
ಶೈಕ್ಷಣಿಕ ಅರ್ಹತೆ (Educational Qualification) :
1. ಸಹಾಯಕ ಗ್ರಂಥಪಾಲಕರು: ಗ್ರಂಥಾಲಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ (Master's Degree) ಜೊತೆಗೆ M.Phil ಅಥವಾ Ph.D ಪೂರ್ಣಗೊಳಿಸಿರಬೇಕು.
2. ಲೈಬ್ರರಿ ಅಪ್ರೆಂಟಿಸ್ ತರಬೇತುದಾರ : ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ (Master's Degree in Library & Information Science) ಪಡೆದಿರಬೇಕು.
ಆಯ್ಕೆ ಪ್ರಕ್ರಿಯೆ (Selection Process):
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರ ವಿದ್ಯಾರ್ಹತೆಯ ಅಂಕಗಳು ಮತ್ತು ನೇರ ಸಂದರ್ಶನದ (Interview) ಮೂಲಕ ಆಯ್ಕೆ ಮಾಡಲಾಗುವುದು. ಈ ನೇಮಕಾತಿಯು ಸಂಪೂರ್ಣವಾಗಿ ಗುತ್ತಿಗೆ ಆಧಾರಿತವಾಗಿದ್ದು, ಒಂದು ವರ್ಷದ ಅವಧಿಗೆ ಇರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
1. ಮೊದಲು ಅಧಿಕೃತ ವೆಬ್‌ಸೈಟ್ bcu.ac.in ಗೆ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
2. ಅರ್ಜಿ ನಮೂನೆಯನ್ನು ಪ್ರಿಂಟ್ ತೆಗೆದುಕೊಂಡು, ಎಲ್ಲಾ ಕಾಲಂಗಳನ್ನು ಸರಿಯಾಗಿ ಭರ್ತಿ ಮಾಡಿ.
3. ಭರ್ತಿ ಮಾಡಿದ ಅರ್ಜಿಯೊಂದಿಗೆ ನಿಮ್ಮ ಶೈಕ್ಷಣಿಕ ದಾಖಲೆಗಳ ಎರಡು ಸೆಟ್ ಸ್ವಯಂ ದೃಢೀಕೃತ (Self-attested) ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ.
4. ಅರ್ಜಿಯನ್ನು ಈ ಕೆಳಗೆ ನೀಡಿರುವ ವಿಳಾಸಕ್ಕೆ ನೇರವಾಗಿ ಅಥವಾ ಅಂಚೆ ಮೂಲಕ ತಲುಪಿಸಿ.
ಅರ್ಜಿ ಸಲ್ಲಿಸಬೇಕಾದ ವಿಳಾಸ:
ಕುಲಸಚಿವರ ಕಛೇರಿ, ಬೆಂಗಳೂರು ನಗರ ವಿಶ್ವವಿದ್ಯಾಲಯ,
ಜ್ಞಾನಜ್ಯೋತಿ ಸೆಂಟ್ರಲ್ ಕಾಲೇಜ್ ಆವರಣ, ಡಾ. ಬಿ.ಆರ್. ಅಂಬೇಡ್ಕರ್ ವೀಧಿ,
ಬೆಂಗಳೂರು - 560001.
ಪ್ರಮಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 06-02-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-02-2026 (ಸಂಜೆ 5:00 ಗಂಟೆಯೊಳಗೆ)
=> ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಪೂರ್ಣವಾಗಿ ಓದಿಕೊಳ್ಳಿ. ಇಂತಹ ಇನ್ನಷ್ಟು ಉದ್ಯೋಗ ಮಾಹಿತಿಗಾಗಿ ಪ್ರತಿದಿನ KPSCVaani.com ಫಾಲೋ ಮಾಡಿ.
- End Date
- 20 ಫೆಬ್ರುವರಿ 2026
- Employment Type
- FULL_TIME
- Organization
- KPSC Vaani (Website)
- Location
- KA,
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.