Loading..!

ಬೆಂಗಳೂರಿನ ನಗರ ಸಿವಿಲ್ ನ್ಯಾಯಾಲಯದ ಕಾರ್ಯಾಲಯ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: PUC SSLC
Published by: Yallamma G | Date:4 ಜನವರಿ 2025
not found

ಬೆಂಗಳೂರಿನಲ್ಲಿರುವ ನಗರ ಸಿವಿಲ್ ನ್ಯಾಯಾಲಯದ ಕಾರ್ಯಾಲಯ, ನ್ಯಾಯಾಲಯದ ಸಂಕೀರ್ಣ ಬೆಂಗಳೂರು ಘಟಕದಲ್ಲಿ ಖಾಲಿ ಇರುವ 58 ಬೆರಳಚ್ಚುಗಾರ ಮತ್ತು ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ವಿವರ : 58 
* ಜವಾನ : 28
* ಬೆರಳಚ್ಚುಗಾರ : 30
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಪಡಿಸಿರುವ ಪ್ರಾರಂಭಿಕ ದಿನಾಂಕ: 23/12/2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06/01/2025
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 06/01/2025

No. of posts:  58
Application Start Date:  23 ಡಿಸೆಂಬರ್ 2024
Application End Date:  6 ಜನವರಿ 2025
Work Location:  ಬೆಂಗಳೂರು
Selection Procedure:

* ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಹತಾ ಶೈಕ್ಷಣಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳು ಹಾಗೂ ಈ ಪ್ರಾಧಿಕಾರ ನಡೆಸುವ ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಒಟ್ಟು ಶೇ ಆಧಾರದ ಮೇಲೆ ಒಂದು ಹುದ್ದೆಗೆ 1:5 ಅನುಪಾತದಂತೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು ಸಂದರ್ಶನಕ್ಕೆ ಒಟ್ಟು 5 ಅಂಕಗಳನ್ನು ನಿಗದಿಪಡಿಸಲಾಗಿದೆ.
* ಜವಾನ ಹುದ್ದೆಗಳಿಗೆ SSLC ಪರೀಕ್ಷೆಯಲ್ಲಿ ಪಡೆದ ಅಂಕಗಳ ಶೇಕಡಾವಾರು ಆಧಾರದ ಮೇಲೆ ಒಂದು ಹುದ್ದೆಗೆ 1:25 ಅನುಪಾತದಂತೆ ಮತ್ತು ಜವಾನ ಹುದ್ದೆಗಳಿಗೆ 1:10 ಅನುಪಾತದಂತೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನಕ್ಕೆ ಒಟ್ಟು 10 ಅಂಕಗಳನ್ನು ನಿಗದಿಪಡಿಸಲಾಗಿದೆ

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಬೆರಳಚ್ಚುಗಾರ ಹುದ್ದೆಗಳಿಗೆ - ಪಿ.ಯು.ಸಿ.(12th) ಅಥವಾ ಡಿಪ್ಲೋಮ (diploma) ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಜವಾನ ಹುದ್ದೆಗಳಿಗೆ SSLC ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕನ್ನಡ ಓದಲು ಬರೆಯಲು ಬರಬೇಕು
Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ. 200/-
*  ಪ್ರವರ್ಗ 2A, 2B, 3A, 3Bಗೆ ಸೇರಿದ ಅಭ್ಯರ್ಥಿಗಳು ರೂ. 100/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ - 1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು. ಮತ್ತು ಗರಿಷ್ಠ ವಯಸ್ಸು ಈ ಕೆಳಕಂಡಂತೆ ಇರಬೇಕು.
* ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 35 ವರ್ಷಗಳು
*  ಪ್ರವರ್ಗ 2A, 2B, 3A, 3Bಗೆ ಸೇರಿದ ಅಭ್ಯರ್ಥಿಗಳು 38 ವರ್ಷಗಳು ಹಾಗೂ
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ - 1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನ ನೀಡಲಾಗುವುದು.
* ಬೆರಳಚ್ಚುಗಾರ : 21,400/- ರಿಂದ  42,000/-
* ಜವಾನ : 17,000/- ರಿಂದ  28,950/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification
To Download the official notification for date Extended

Comments

User ಮಾರ್ಚ್ 17, 2024, 6:15 ಅಪರಾಹ್ನ