ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ಇಲ್ಲಿ ಖಾಲಿ ಇರುವ 50 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಭಾರತ ಸರಕಾರ ಹಾಗೂ ಕರ್ನಾಟಕ ಸರಕಾರದ ಸಹಭಾಗಿತ್ವದ ಒಂದು ಉದ್ಯಮವಾಗಿದ್ದು ಸದರಿ ನಿಗಮದಲ್ಲಿ ಖಾಲಿ ಇರುವ ಒಟ್ಟು 50 ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯು 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು ಅರ್ಹರಾದ ಮಾಜಿ ಸೈನಿಕ ಸಿಬ್ಬಂದಿಗಳು ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕಾರ್ಯಾಧ್ಯಕ್ಷತೆ ಆಧಾರದ ಮೇಲೆ ಗುತ್ತಿಗೆಯ ನೇಮಕಾತಿ ಅವಧಿಯನ್ನು ವಿಸ್ತರಿಸುವ ಸಾಧ್ಯತೆ ಕೂಡ ಇರುತ್ತದೆ. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಲು ಕೊನೆಯ ದಿನಾಂಕ 10 ಜನವರಿ 2022 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
To Download Official Notification of BMRCL Bengaluru Metro Station Controller Recruitment 2021

Comments