ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Yallamma G | Date:30 ಸೆಪ್ಟೆಂಬರ್ 2022

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವೈದ್ಯಕೀಯ ಅಧಿಕಾರಿ, ನರ್ಸಿಂಗ್ ಬೋಧಕ, ಕಚೇರಿ ಸಹಾಯಕ, ತಾಂತ್ರಿಕ ಸಂಯೋಜಕರು, ಪ್ರೋಗ್ರಾಂ ಅಸಿಸ್ಟೆಂಟ್ ಮತ್ತು ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
* ಪ್ರೋಗ್ರಾಂ ಅಸಿಸ್ಟೆಂಟ್, ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ ಹುದ್ದೆಗಳಿಗೆ ದಿನಾಂಕ 12/10/20222 ರಂದು ಸಂದರ್ಶನ ನಡೆಯುವುದು.ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ಸಮಿತಿ ಕೊಠಡಿ, ಶೈಕ್ಷಣಿಕ ಮತ್ತು ಮೌಲ್ಯಮಾಪನ ವಿಭಾಗ,
NRC ಕಟ್ಟಡ, 4 ನೇ ಮಹಡಿ, ಗ್ರಂಥಾಲಯದ ಎದುರು,
ಆಡಳಿತಾತ್ಮಕ ಬ್ಲಾಕ್, ನಿಮ್ಹಾನ್ಸ್.
No. of posts: 23
Application Start Date: 29 ಸೆಪ್ಟೆಂಬರ್ 2022
Application End Date: 12 ಅಕ್ಟೋಬರ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೆಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು M.B.B.S/ MD/ DNB/ MA/ M.Sc/ M.Phil/ MSW/ PhD/ BE/ B.Tech/ MCAವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, KA,




Comments