ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಹಾಗೂ ಸಮಾಜ ಸೇವಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ 25-ನವೆಂಬರ್-2022 ರಂದು ಅಥವಾ ಮೊದಲು ಕಳುಹಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ:
ರಿಜಿಸ್ಟ್ರಾರ್,
ನಿಮ್ಹಾನ್ಸ್, ಪಿಬಿ ನಂ.2900,
ಹೊಸೂರು ರಸ್ತೆ,
ಬೆಂಗಳೂರು-560029
ಸಮಾಜ ಸೇವಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, genectstudy@gmail.com ಗೆ 28-Nov-2022 ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಡಿಪ್ಲೊಮಾ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು
* ತಾಂತ್ರಿಕ ಹುದ್ದೆಗಳಿಗೆ
SC/ST ಅಭ್ಯರ್ಥಿಗಳು: ರೂ.295/-
UR/OBC ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು: ರೂ.590/- ಶುಲ್ಕ ಪಾವತಿಸಬೇಕು.
* ಸಮಾಜ ಸೇವಕರ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವದಿಲ್ಲ
* ಈ ಕುರಿತಾಗಿ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು
* ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 30 ರಿಂದ 35 ವರ್ಷ ವಯೋಮಿತಿ ಹೊಂದಿರಬೇಕು.
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ
* ಸಮಾಜ ಸೇವಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 16-ಡಿಸೆಂಬರ್-2022 ರಂತೆ 35 ವರ್ಷಗಳು ವಯೋಮಿತಿ ಹೊಂದಿರಬೇಕು.
ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ತಾಂತ್ರಿಕ ಹಾಗೂ ಸಮಾಜ ಸೇವಕರ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ತಾಂತ್ರಿಕ ಹುದ್ದೆಗಳಿಗೆ ಆಯ್ಕೆ ಆಗಿರುವ ಅಭ್ಯರ್ಥಿಗಳಿಗೆ 24000/- ನಿಗದಿಪಡಿಸಲಾಗಿರುತ್ತದೆ.
* ಸಮಾಜ ಸೇವಕರ ಹುದ್ದೆಗಳಿಗೆ ಆಯ್ಕೆ ಆಗಿರುವ ಅಭ್ಯರ್ಥಿಗಳಿಗೆ 20,000/- ನಿಗದಿಪಡಿಸಲಾಗಿರುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments