ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 14 ನ್ಯೂರೋ ಅನಸ್ತೇಷಿಯಾ ಟೆಕ್ನಲಾಜಿಸ್ಟ್ , ರೇಡಿಯೋಲಾಜಿಕಲ್ ಟೆಕ್ನಲಾಜಿಸ್ಟ್, ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/05/2023 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
NIMHANS, P.B No.2900, Hosur Road,
Bengaluru-560029,
ಹುದ್ದೆಗಳ ವಿವರ : 14
ನ್ಯೂರೋ ಸರ್ಜರಿ - 3
ಅನಸ್ತೇಷಿಯಾಲಜಿ - 6
ನ್ಯೂರೋ ಅನಸ್ತೇಷಿಯಾ ಟೆಕ್ನಲಾಜಿಸ್ಟ್ - 3
ಜೂನಿಯರ್ ಆಪರೇಷನ್ ಥೀಯೇಟರ್ ಟೆಕ್ನಿಷಿಯನ್ - 1
ರೇಡಿಯೋಲಾಜಿಕಲ್ ಟೆಕ್ನಲಾಜಿಸ್ಟ್ - 1
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆ, ಸಂದರ್ಶನ ನಡೆಸುವದರ ಮೂಲಕ ಆಯ್ಕೆ ಮಾಡಲಾಗುವದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.SC, M.CH, ಹಾಗೂ MD,ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು
*ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 590/- ಅರ್ಜಿ ಶುಲ್ಕ
* ಒಬಿಸಿ/ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ರೂ. 295/- ಅರ್ಜಿ ಶುಲ್ಕ ಇರುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 37 ವರ್ಷ ವಯೋಮಿತಿಯನ್ನು ಮೀರಿರಬಾರದು.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ 67,700 /- ರೂ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಪಡೆಯಬಹುದಾಗಿದೆ.





Comments