ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ದಿಂದ ಒಟ್ಟು 400 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ.
| Date:21 ಆಗಸ್ಟ್ 2019

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಖಾಲಿ ಇರುವ ಸುಮಾರು 400 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ BESCOM ಪ್ರಕಟಣೆ ಹೊರಡಿಸಿದೆ.ಈ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಆಸಕ್ತ ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಈ ಕೆಳಗೆ ನೀಡುರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಂಡು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಕೊನೆಯ ದಿನಾಂಕ ಅಂದರೆ ಆಗಸ್ಟ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts: 400
Application Start Date: 16 ಆಗಸ್ಟ್ 2019
Application End Date: 31 ಆಗಸ್ಟ್ 2019
Selection Procedure: ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಇಂಜಿನಿಯರಿಂಗ್‌ನಲ್ಲಿ ಪದವಿ ಅಥವಾ 3 ವರ್ಷದ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee: ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ
Pay Scale: ಇಂಜಿನಿಯರಿಂಗ್ ಪದವಿ ಹೊಂದಿರುವ ಅಭ್ಯರ್ಥಿಗಳಿಗೆ 7000/-ರೂ ಸ್ಟೈಫೆಂಡ್ ಮತ್ತು ಡಿಪ್ಲೋಮ ಹೊಂದಿರುವ ಅಭ್ಯರ್ಥಿಗಳಿಗೆ 5000/-ರೂ ಸ್ಟೈಫೆಂಡ್ ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಂತೆ ಎಲ್ಲಾ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಆಗಸ್ಟ್ 31,2019ರ ಸಂಜೆ 4 ಗಂಟೆಯೊಳಗೆ ನೇರವಾಗಿ ಅಥವಾ ಅಂಚೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಬೇಕಾದ ಕಚೇರಿಯ ವಿಳಾಸ:
ಉಪ ಪ್ರಧಾನ ವ್ಯವಸ್ಥಾಪಕರು,
ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ,
ಬೆ.ವಿ.ಕಂ ಕ್ರೆಸೆಂಟ್ ಟವರ್ಸ್,ಕ್ರೆಸೆಂಟ್ ರೋಡ್,
ಮಲ್ಲಿಗೆ ನರ್ಸಿಂಗ್ ಹೋಂ ಹತ್ತಿರ, ರೇಸ್ಕೋರ್ಸ್,
ಬೆಂಗಳೂರು-560001
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಂತೆ ಎಲ್ಲಾ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಆಗಸ್ಟ್ 31,2019ರ ಸಂಜೆ 4 ಗಂಟೆಯೊಳಗೆ ನೇರವಾಗಿ ಅಥವಾ ಅಂಚೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಬೇಕಾದ ಕಚೇರಿಯ ವಿಳಾಸ:
ಉಪ ಪ್ರಧಾನ ವ್ಯವಸ್ಥಾಪಕರು,
ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ,
ಬೆ.ವಿ.ಕಂ ಕ್ರೆಸೆಂಟ್ ಟವರ್ಸ್,ಕ್ರೆಸೆಂಟ್ ರೋಡ್,
ಮಲ್ಲಿಗೆ ನರ್ಸಿಂಗ್ ಹೋಂ ಹತ್ತಿರ, ರೇಸ್ಕೋರ್ಸ್,
ಬೆಂಗಳೂರು-560001




Comments