ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ 12 ಸೀನಿಯರ್ ಇಂಜಿನಿಯರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ಲಭ್ಯವಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕೆಳಗಿನ ಕಛೇರಿಗೆ ವಿಳಾಸಕ್ಕೆ ದಿನಾಂಕ :08-12-2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕಛೇರಿ ವಿಳಾಸ:
Manager (HR/SC&US/HLS&SCB),
Bharat Electronics Ltd, Jalahalli Post, Bengaluru - 560013.
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ದಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 01-11-2021ರ ಅನ್ವಯ ಈ ಕೆಳಗಿನಂತೆ ವಯೋಮಿತಿಯನ್ನು ಹೊಂದಿರತಕ್ಕದ್ದು.
* ಸೀನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು ಗರಿಷ್ಟ 32 ವರ್ಷ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು ಗರಿಷ್ಟ 36 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷ, OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತು PH ಅಭ್ಯರ್ಥಿಗಳಿಗೆ 10 ವರ್ಷಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ದಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಇಂಜಿನಿಯರ್ ಹುದ್ದೆಗೆ ಪ್ರತಿ ತಿಂಗಳಿಗೆ ರೂ 50,000/- ರಿಂದ ರೂ 1,60,000/- ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ ಪ್ರತಿ ತಿಂಗಳಿಗೆ ರೂ 60,000/- ರಿಂದ ರೂ 1,80,000/- ವೇತನವನ್ನು ಪಡೆಯುವರು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments