ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ ಟ್ರೈನಿ ಇಂಜಿನಿಯರ್-I ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Surekha Halli | Date:17 ಮೇ 2021

ಕೇಂದ್ರ ಸರ್ಕಾರೀ ಸ್ವಾಮ್ಯದ ಸಂಸ್ಥೆಯಾದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಪ್ರಾಥಮಿಕವಾಗಿ ಭಾರತೀಯ ಸಶಸ್ತ್ರ ಪಡೆಗಳಿಗೆ ಸುಧಾರಿತ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ತಯಾರಿಸುತ್ತದೆ. ಪ್ರಸ್ತುತ ಸಂಸ್ಥೆಯಲ್ಲಿ ಖಾಲಿ ಇರುವ ಟ್ರೈನಿ ಇಂಜಿನಿಯರ್-I ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ದಿನಾಂಕ 21-05-2021 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
No. of posts: 30
Application Start Date: 15 ಮೇ 2021
Application End Date: 21 ಮೇ 2021
Selection Procedure: - ಮೆರಿಟ್ ಆಧಾರದ ಮೇಲೆ ಮತ್ತು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification: - ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
Fee:
- ಅರ್ಜಿದಾರರು 200/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
- ಅಂಗವಿಕಲ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯತಿಯನ್ನು ನೀಡಲಾಗಿದೆ.
Age Limit:
ದಿನಾಂಕ ಏಪ್ರಿಲ್ 1, 2021ರ ಅನ್ವಯ ಗರಿಷ್ಠ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 25000/- ರೂ ವೇತನ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments