ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಮೇಲ್ವಿಚಾರಕರು ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಆಫ್‌ಲೈನ್‌ನಲ್ಲಿ 11 ಮೇ 2024 ಹಾಗೂ 13 ಮೇ 2024 ರೊಳಗಾಗಿ ಆನ್ ಲೈನ್ ಹಾಗೂ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಳಾಸ
AGM (HR), Bharat Heavy Electricals Limited,
Electronics Division, P. B. No. 2606,
Mysore Road, Bengaluru-560026
ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಎಲೆಕ್ಟ್ರಾನಿಕ್ಸ್‌ನಲ್ಲಿ ಡಿಪ್ಲೋಮಾ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
PwBD (ST) ಅಭ್ಯರ್ಥಿಗಳಿಗೆ : 15 ವರ್ಷ
ST ಅಭ್ಯರ್ಥಿಗಳಿಗೆ : 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments