Loading..!

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ನೇಮಕಾತಿ 2025 – 300 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: SSLC
Published by: Bhagya R K | Date:2 ಅಕ್ಟೋಬರ್ 2025
not found

ITI ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಇಲ್ಲಿದೆ ಸುವರ್ಣ ಅವಕಾಶ, ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ 300 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಉತ್ಸಾಹಿಗಳು ಈ ಅವಕಾಶವನ್ನು ಸದುಪಯೋಗ ಪಡೆಸಿಕೊಂಡು ತಮ್ಮ ವೃತ್ತಿ ಜೀವನವನ್ನು ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಪ್ರಾರಂಭಿಸಬಹುದಾಗಿದೆ.


          ಈ ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಫಿಟ್ಟರ್, ವೆಲ್ಡರ್, ಎಲೆಕ್ಟ್ರಿಷಿಯನ್, ಟರ್ನರ್, ಯಂತ್ರಶಿಲ್ಪಿ, ಫೌಂಡ್ರಿಮ್ಯಾನ್ ಮತ್ತು ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಈ ನೇಮಕಾತಿಯು ಮೀಸಲಾತಿ ವರ್ಗಗಳಿಗೆ ವಯೋಮಿತಿಯಲ್ಲಿ ರಿಯಾಯಿತಿ ನೀಡಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಈ ನೇಮಕಾತಿಯು ITI ಪಾಸಾದ ಅಭ್ಯರ್ಥಿಗಳಿಗೆ ಮಹತ್ವದ ಅವಕಾಶವಾಗಿದ್ದು, ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದವರಿಗೆ ಇದು ಉತ್ತಮ ಚಾನ್ಸ್ ಆಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ 03-ಅಕ್ಟೋಬರ್-2025ರೊಳಗೆ ಅರ್ಜಿ ಸಲ್ಲಿಸಬಹುದು.


      ಇದು ಕೇವಲ ನೌಕರಿ ಮಾತ್ರವಲ್ಲ, ಸ್ಥಿರ ವೇತನ, ಪಿಂಚಣಿ ಸೌಲಭ್ಯಗಳು ಮತ್ತು ಉಜ್ವಲ ಭವಿಷ್ಯದ ಅವಕಾಶವಾಗಿದೆ. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳು, ಅರ್ಹತಾ ಮಾನದಂಡಗಳು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮತ್ತು ಆಯ್ಕೆಯ ಪ್ರಕ್ರಿಯೆಯ ಕುರಿತು ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನಿಮ್ಮ ಕನಸಿನ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಸಿದ್ಧರಾಗಿ! 


📌ಬಿಎಚ್‌ಇಎಲ್ ಹುದ್ದೆಯ ಅಧಿಸೂಚನೆ
ಸಂಸ್ಥೆಯ ಹೆಸರು: ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL)
ಹುದ್ದೆಗಳ ಸಂಖ್ಯೆ: 300
ಉದ್ಯೋಗ ಸ್ಥಳ: ಹೈದರಾಬಾದ್ - ತೆಲಂಗಾಣ
ಹುದ್ದೆ ಹೆಸರು: ಟ್ರೇಡ್ ಅಪ್ರೆಂಟಿಸ್
ಸಂಬಳ: ತಿಂಗಳಿಗೆ ರೂ. 9,700 – 10,000/-

Comments