Loading..!

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಚೇರಿ, ಬೀದರ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: SSLC
Published by: Rukmini Krushna Ganiger | Date:13 ಸೆಪ್ಟೆಂಬರ್ 2021
not found

- ಬೀದರ್ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ 21 ಖಾಲಿ ಇರುವ ಹಿಂಬಾಕಿ ಹುದ್ದೆಗಳಾದ ಸ್ಟೆನೋಗ್ರಾಫರ್ ಗ್ರೇಡ್ III ಮತ್ತು ಟೈಪಿಸ್ಟ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಅಭ್ಯರ್ಥಿಗಳು ಅರ್ಜಿಯನ್ನು ಬೀದರ್ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅಧಿಕೃತ ವೆಬ್ ಸೈಟ್ ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್ಲೈನ್ ನಲ್ಲಿ ದಿನಾಂಕ : 09/10/2021  ರವರೆಗೆ ಮಾತ್ರ ಸಲ್ಲಿಸತಕ್ಕದ್ದು 


* ಹುದ್ದೆಗಳ ವಿವರ : 
1. ಸ್ಟೆನೋಗ್ರಾಫರ್ ಗ್ರೇಡ್ III - 12
2. ಟೈಪಿಸ್ಟ್ -  09 

No. of posts:  21
Application Start Date:  13 ಸೆಪ್ಟೆಂಬರ್ 2021
Application End Date:  9 ಅಕ್ಟೋಬರ್ 2021
Work Location:  Bidar
Selection Procedure: - ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರ ಹುದ್ದೆಗಳ) (ತಿದ್ದುಪಡಿ) ನೇಮಕಾತಿ ನಿಯಮಗಳು 2007 ರ ಪ್ರಕಾರ ನೇಮಕಾತಿಯನ್ನು ನಡೆಸಲಾಗುವುದು.
Qualification:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು. 

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.
Fee:
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 200/-

- ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ ರೂ. 200/-     

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ. 100/-  ಅರ್ಜಿ ಶುಲ್ಕ ಇರುತ್ತದೆ.
Age Limit:
- ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು. 

* ಗರಿಷ್ಟ ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷ

* 2ಎ, 2ಬಿ, 3ಎ, 3ಬಿ  ವರ್ಗದ ಅಭ್ಯರ್ಥಿಗಳಿಗೆ : 38 ವರ್ಷ 

* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ- 1 ರ ಅಭ್ಯರ್ಥಿಗಳಿಗೆ : 40 ವರ್ಷ
Pay Scale:
- ಸ್ಟೆನೋಗ್ರಾಫರ್ ಗ್ರೇಡ್ III ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 27650/- ವೇತನ ಹಾಗೂ ಟೈಪಿಸ್ಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 21400/- ವೇತನ ಇತರೆ ಭತ್ಯೆಗಳನ್ನು ಪಡೆಯುವರು.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. 



To Download the Official Notification

Comments

User ಸೆಪ್ಟೆ. 4, 2022, 12:27 ಅಪರಾಹ್ನ