ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ 236 ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ236 ಸೆಕ್ಷನ್ ಇಂಜಿನಿಯರ್, ಮೆಂಟೇನರ್ಸ್, ಸ್ಟೇಷನ್ ಕಂಟ್ರೋಲರ್/ ಟ್ರೇನ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಭಾರತೀಯ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 27/04/2023 ದೊಳಗಾಗಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 236
- ಸ್ಟೇಷನ್ ಕಂಟ್ರೋಲರ್/ ಟ್ರೇನ್ ಆಪರೇಟರ್ : 108
- ಮೆಂಟೇನರ್ಸ್ : 114
- ಸೆಕ್ಷನ್ ಇಂಜಿನಿಯರ್ : 14
* ಸಾಮಾನ್ಯ ಅಭ್ಯರ್ಥಿಗಳಿಗೆ ಮತ್ತು ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 1180/-
* SC/ST/CAT-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. ಅರ್ಜಿ ಶುಲ್ಕವನ್ನು 590/- ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.40,000/- to 94,500/- ವೇತನ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments