"ನಮ್ಮ ಮೆಟ್ರೋ" ಖ್ಯಾತಿಯ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL)ನ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ.

ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಜಂಟಿ ಸಹಭಾಗಿತ್ವದಲ್ಲಿ ಕಾರ್ಯ ನಿರ್ವಹಿಸುತ್ತಿರುವ, ಪ್ರಯಾಣದ ಸೌಕರ್ಯ ಮಟ್ಟವನ್ನು ಪಟ್ಟಣ ನಾಗರಿಕರಿಗೆ ಅಪಾರವಾಗಿ ಹೆಚ್ಚಿಸಲು ಸಹಕರಿಸುತ್ತಿರುವ ಕನ್ನಡಿಗರ ಹೆಮ್ಮೆಯ ದ್ವನಿಯಾಗಿರುವ "ನಮ್ಮ ಮೆಟ್ರೋ" ಖ್ಯಾತಿಯ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL)ನ ಚೀಫ್ ಸೆಕ್ಯೂರಿಟಿ ಆಫೀಸರ್, ಚೀಫ್ ಫೈಯರ್ ಆಫೀಸರ್ ಮತ್ತು ಫೈರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 17/04/2023 ಹಾಗೂ 20/04/2023 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ : General Manager (HR),
Bangalore Metro Rail Corporation Limited,
III Floor, BMTC Complex, K.H. Road, Shanthinagar, Bengaluru 560 027
* ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕ ಮತ್ತು ವೃತ್ತಿ ಅನುಭವ ಆಧರಿಸಿ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ PUC / ಬಿಇ (BE)/ ಡಿಪ್ಲೋಮಾ/ M.Com/MBA ಪದವಿ ವಿದ್ಯಾರ್ಹತೆಯನ್ನು ಹಾಗೂ ಕಂಪ್ಯೂಟರ್ ಜ್ಞಾನವನ್ನು ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 25 ವರ್ಷ ಹಾಗೂ ಗರಿಷ್ಠ 50 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಫೈರ್ ಮ್ಯಾನ್ ಹುದ್ದೆಗಳಿಗೆ ಮಾಸಿಕ ವೇತನ 25,000/- ರೂ ಗಳು ಹಾಗೂ ಉಳಿದ ಹುದ್ದೆಗಳಿಗೆ ಮಾಸಿಕ ವೇತನ 50,000/- ರೂ ಗಳಿಂದ 1,40,000 /- ರೂಗಳ ವರೆಗೆ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments