ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ ಡೆಪ್ಯೂಟಿ ಜನರಲ್ ಮ್ಯಾನೇಜರ್, ಜಿಯೋಲಾಜಿಸ್ಟ್, ಫೈಯರ್ ಇನ್ ಸ್ಪೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವಿವಿಧ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಗಳು
* ಡೆಪ್ಯೂಟಿ ಚೀಫ್ ಇಂಜಿನಿಯರ್, ಡೆಪ್ಯೂಟಿ ಜನರಲ್ ಮ್ಯಾನೇಜರ್, ಎಕ್ಸಿಕೂಟಿವ್ ಇಂಜಿನಿಯರ್, ಅಸಿಸ್ಟೆಂಟ್ ಎಕ್ಸಿಕೂಟಿವ್ ಇಂಜಿನಿಯರ್ ಸೀನಿಯರ್, ಜಿಯೋಲಾಜಿಸ್ಟ್ ಹಾಗೂ ಜಿಯೋಲಾಜಿಸ್ಟ್ ಒಟ್ಟು 16 - ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :21/03/2023
* ಫೈಯರ್ ಇನ್ ಸ್ಪೆಕ್ಟರ್, ಸೇಫ್ಟಿ ಹಾಗೂ ಹೆಲ್ತ್ ಗೆ ಸಂಬಂಧಿಸಿದಂತೆ ಚೀಫ್ ಇಂಜಿನಿಯರ್, ಅಸಿಸ್ಟೆಂಟ್ ಇಂಜಿನಿಯರ್ ಹಾಗೂ ಅಸಿಸ್ಟೆಂಟ್ ಎಕ್ಸಿಕೂಟಿವ್ ಇಂಜಿನಿಯರ್ ಒಟ್ಟು ಹುದ್ದೆಗಳು 10 - ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 14/03/2023
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಡಿಪ್ಲೊಮಾ, ಇಂಜಿನಿಯರಿಂಗ್ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. ಡೆಪ್ಯೂಟಿ * ಚೀಫ್ ಇಂಜಿನಿಯರ್ /ಡೆಪ್ಯೂಟಿ ಜನರಲ್ ಮ್ಯಾನೇಜರ್, ಎಕ್ಸಿಕೂಟಿವ್ ಇಂಜಿನಿಯರ್, ಅಸಿಸ್ಟೆಂಟ್ ಎಕ್ಸಿಕೂಟಿವ್ ಇಂಜಿನಿಯರ್ ಸೀನಿಯರ್ ಹುದ್ದೆಗಳಿಗೆ ಗರಿಷ್ಠ 62 ವರ್ಷ ವಯೋಮಿತಿಯನ್ನು ಮೀರಿರಬಾರದು.
* ಸೀನಿಯರ್ ಜಿಯೋಲಾಜಿಸ್ಟ್ ಹುದ್ದೆಗೆ ಗರಿಷ್ಠ 55 ವರ್ಷ ಹಾಗೂ ಜಿಯೋಲಾಜಿಸ್ಟ್ ಹುದ್ದೆಗೆ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
* ಫೈಯರ್ ಇನ್ ಸ್ಪೆಕ್ಟರ್ ಹುದ್ದೆಗಳಿಗೆ ಗರಿಷ್ಠ 38 ವರ್ಷವಯೋಮಿತಿಯನ್ನು ಮೀರಿರಬಾರದು. ಹಾಗೂ
* ಸೇಫ್ಟಿ ಹಾಗೂ ಹೆಲ್ತ್ ಗೆ ಸಂಬಂಧಿಸಿದಂತೆ ಚೀಫ್ ಇಂಜಿನಿಯರ್, ಅಸಿಸ್ಟೆಂಟ್ ಇಂಜಿನಿಯರ್, ಅಸಿಸ್ಟೆಂಟ್ ಎಕ್ಸಿಕೂಟಿವ್ ಇಂಜಿನಿಯರ್ ಹುದ್ದೆಗಳಿಗೆ ಕನಿಷ್ಠ 40 ವರ್ಷ ಗರಿಷ್ಠ 55 ವರ್ಷ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ ಮಾಸಿಕ ವೇತನ 40,000/- ರೂ ಗಳಿಂದ 1,40,000/- ರೂ ಗಳ ವರೆಗೆ ವೇತನ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments